Skip to content Skip to footer

ಗುರುಪೂರ್ಣಿಮಾ ಮಹೋತ್ಸವ 2023

ಗುರುಪೂರ್ಣಿಮಾ ಮಹೋತ್ಸವದ ಪ್ರಯುಕ್ತ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ  ಆಯೋಜಿಸಲಾಗಿದ್ದ ಪ್ರತಿಭಾ ಪುರಸ್ಕಾರ – 2023

                                                                                                                                      ॥ಜೈ ಶ್ರೀ ಗುರುದೇವ್॥
            ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಬಿಜಿಎಸ್ ಸಭಾಮಂಟಪದಲ್ಲಿ ಗುರುಪೂರ್ಣಿಮಾ ಮಹೋತ್ಸವದ ಪ್ರಯುಕ್ತ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಪ್ರತಿಭಾ ಪುರಸ್ಕಾರ – 2023 ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ದಿವ್ಯ ಸಾನಿಧ್ಯವಹಿಸಿ ಆಶೀರ್ವಚನ ನೀಡಿದರು. ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠಗಳ ಪೂಜ್ಯ ಸ್ವಾಮೀಜಿಗಳವರು, ಮಂಡ್ಯ ಜಿಲ್ಲಾಧಿಕಾರಿಗಳಾದ ಡಾ. ಕುಮಾರ IAS, ಮಂಡ್ಯ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ.ಪುಟ್ಟರಾಜು ಅವರು, VTU ಉಪಕುಲಪತಿಗಳಾದ ಡಾ. ವಿದ್ಯಾಶಂಕರ್ ಅವರು, ACU ಉಪಕುಲಪತಿಗಳಾದ ಡಾ. ಎಂ ವಿ ಶೇಖರ್ ಅವರು, ಸಾ.ಶಿ.ಇಲಾಖೆ ಉಪ ನಿರ್ದೇಶಕರಾದ ಜವರೇಗೌಡ ಎಸ್. ಟಿ. ಅವರು, ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಉಮೇಶ್ ಎಸ್ ಅವರು, SACST(R) ಆಡಳಿತಾಧಿಕಾರಿಗಳಾದ ಡಾ. ಎ ಟಿ ಶಿವರಾಮ್ ಅವರು, ಬಿಜಿಎಸ್ ವಿದ್ಯಾಸಂಸ್ಥೆಗಳ ಮುಖ್ಯಸ್ಥರು, ವಿದ್ಯಾರ್ಥಿಗಳು, ಪೋಷಕರು ಹಾಗೂ ಶ್ರೀ ಮಠದ ಸದ್ಭಕ್ತರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಪರಮಪೂಜ್ಯ ಮಹಾಸ್ವಾಮೀಜಿಯವರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆಶೀರ್ವದಿಸಿದರು

ಶ್ರೀ ಗುರುಪೂರ್ಣಿಮಾ ಮಹೋತ್ಸವ ಪೂಜಾ ಕೈಂಕರ್ಯ

॥ಜೈ ಶ್ರೀ ಗುರುದೇವ್॥
ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಗುರುಪೂರ್ಣಿಮೆ ಪ್ರಯುಕ್ತ ಶ್ರೀ ಮಠದ ದೇವಾಲಯಗಳಲ್ಲಿ ಹೋಮ, ಅಭಿಷೇಕ, ವಿಶೇಷ ಪೂಜಾ ಕೈಂಕರ್ಯಗಳು ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಗಳವರ ದಿವ್ಯ ಸಾನಿಧ್ಯದಲ್ಲಿ ನೆರವೇರಿಸಿದರು. ಪೂಜಾ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಶಾಖಾ ಮಠಗಳ ಪೂಜ್ಯ ಸ್ವಾಮೀಜಿಗಳವರು ಹಾಗೂ ಸದ್ಭಕ್ತರು ಉಪಸ್ಥಿತರಿದ್ದು ಪರಮಪೂಜ್ಯ ಮಹಾಸ್ವಾಮೀಜಿಗಳವರಿಂದ ಆಶೀರ್ವಾದ ಪಡೆದರು